ಹಾಸನ: ವಕೀಲ ದೇವರಾಜೇಗೌಡರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಿನ್ಸಿಪಲ್ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ದರಾಮ್.ಎಸ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ದೇವರಾಜೇಗೌಡ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ, ಪೊಲೀಸರು ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyuru) ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದರು.
ನಂತರ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದರು. ಮೆಡಿಕಲ್ ಟೆಸ್ಟ್ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ದೇವರಾಜೇಗೌಡ ಕಾರು ಚಾಲಕನನ್ನು ಕರೆದೊಯ್ದು ಪೊಲೀಸರು ಕಾರು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೊಬೈಲ್ ಕೂಡ ವಶಕ್ಕೆ ಪಡೆದಿದ್ದಾರೆ. ಸದ್ಯ ದೇವರಾಜೇಗೌಡ ಕಾರು ಪೊಲೀಸರ ವಶದಲ್ಲಿದೆ. ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಆರೋಪ ಕೇಳಿ ಬಂದಿದೆ.