ಬೆಂಗಳೂರು: ಬೆಂಗಳೂರಿನ ಹಿರಿಯ ವಕೀಲ ಕೆ.ಎನ್. ಜಗದೀಶ್ ಅವರನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ.
ಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡು ಓಡಾಡುತ್ತಿದ್ದ ಕೆ.ಎನ್. ಜಗದೀಶ್ ಕುಮಾರ್ (K.N Jagadish Kumar) ಅವರನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು (Kodigehalli Police) ಅರೆಸ್ಟ್ ಮಾಡಿದ್ದಾರೆ.
ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಜಗದೀಶ್ ವಿರುದ್ಧ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಆದರೂ ಜಗದೀಶ್ ಕೋರ್ಟ್‍ಗೆ (Court) ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಆದರೆ, ಜಗದೀಶ್ ಮಾತ್ರ ಗೋವಾದಲ್ಲಿ (Goa) ತಲೆ ಮರೆಸಿಕೊಂಡಿದ್ದರು. ಹೀಗಾಗಿ ಪೊಲೀಸರು ಗೋವಾಕ್ಕೆ ತೆರಳಿ ಅಲ್ಲಿ ಬಂಧಿಸಿ ಕರೆ ತಂದಿದ್ದಾರೆ.








