ಬೆಳಗಾವಿ : ಗ್ರಾಮೀಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ಅಡ್ಡಿ ಪಡಿಸಿದ ಭಜರಂಗದಳ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೈ ಭಜರಂಗಿ ಎನ್ನುವುದರ ಮೂಲಕ ತಿರುಗೇಟು ನೀಡಿದ್ದಾರೆ.
ಭಜರಂಗದಳ ಕಾರ್ಯಕರ್ತರ ಎದುರೇ ‘ಬಜರಂಗಬಲಿ ಕೀ ಜೈ’ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಯಲ್ಲಿ ಭಜರಂಗದಳ ನಿಷೇಧ ಅಂಶ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ ಪಕ್ಷದವರು ಕಾಂಗ್ರೆಸ್ ಹಣಿಯುವ ಕಾರ್ಯ ಮಾಡುತ್ತಿದ್ದರು.
ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಭಜರಂಗದಳ ಕಾರ್ಯಕರ್ತರು ಅಡ್ಡಿ ಪಡಿಸಿ, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೈ ಭಜರಂಗ ಬಲಿ, ಪವನಪುತ್ರ ಹನುಮಾನ್ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.