ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ; ಆರ್. ಅಶೋಕ್

ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

Author2 by Author2
September 12, 2024
in Hale Mysore, ಬೆಂಗಳೂರು, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮತಾಂಧ ಶಕ್ತಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯದಲ್ಲಿ (Karnataka) ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ (Ganesh Procession) ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ.

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ. ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್‌ ಅವರನ್ನು ಒತ್ತಾಯಿಸುತ್ತೇನೆ ಎಂದು ಟ್ವಿಟ್ ನಲ್ಲಿ ಮನವಿ ಮಾಡಿದ್ದಾರೆ.

Tags: #mandyaincident#sakshanewsLatestnewsR AshokReaction
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

by Shwetha
January 25, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದುಡಿಯುವ ಮಹಿಳೆಯರಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮೂಡುವಂತಹ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ರಾಜಧಾನಿಯ ಕೆಂಗೇರಿಯಲ್ಲಿ ನಡೆದಿದೆ. ಕೇವಲ ಕೆಲಸಕ್ಕೆ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

by Shwetha
January 20, 2026
0

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಚಾಲಕರಹಿತ (ಡ್ರೈವರ್‌ಲೆಸ್) ಮೆಟ್ರೋ ರೈಲು ಆಗಮಿಸಿದ್ದು, ಇದು ಹಳದಿ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram