ಕದನ ವಿರಾಮ ಘೋಷಿಸಿರುವುದ ಸರ್ಕಾರ, ನಾವಲ್ಲ – ರೈತ ನಾಯಕ ಟಿಕಾಯತ್
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ನರೇಂದ್ರ ಮೋದಿ ಕೇಂದ್ರ ಸರ್ಕಾರ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಕದನ ವಿರಾಮಕ್ಕೆ ಕರೆ ನೀಡಿರುವುದು ಸರಕಾರವೇ ಹೊರತು ನಾವಲ್ಲ, ಜಿನ್ನಾ, ಹಿಂದೂ ಮತ್ತು ಮುಸ್ಲಿಮರ ಹೆಸರಿನಲ್ಲಿ ರೈತರನ್ನು ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿವೆ, ಆದರೆ ರೈತರು ಮತ್ತು ಯುವಕರು ಒಗ್ಗಟ್ಟಾಗಿ ನಿಲ್ಲಬೇಕು,ರಾಜಕೀಯ ಷಡ್ಯಂತ್ರಗಳಿಗೆ ಒಳಗಾಗಕೂಡದು ಎಂದು ಹೇಳಿದರು.
ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ, ದೇಶದಲ್ಲಿ ಎಂಎಸ್‌ಪಿ ಕಾನೂನು ಆಗುವವರೆಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕಿಸಾನ್ ಮಹಾಪಂಚಾಯತ್‌ನಲ್ಲಿ ಸೋಮವಾರ ಮಾತನಾಡಿದ ಟಿಕಾಯತ್ ತಿಳಿಸಿದರು.