ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸೇರಿದಂತೆ ನಾಯಕರು ಉತ್ತಮ ಸಮಯಕ್ಕೆ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡುವಂತೆ ನಾನು ಎಂದಿಗೂ ಕೇಳಿಲ್ಲ. ಈ ಕುರಿತು ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ.
ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25ಕ್ಕೂ ಅಧಿಕ ಸ್ಥಾನ ಗೆಲ್ಲಬೇಕಿದೆ. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಮತ್ತೊಮ್ಮೆ ಮೋದಿಯಂತಹ ಮಹಾನ್ ನಾಯಕರು ಪ್ರಧಾನಿಯಾಗಲಿದ್ದಾರೆ ಎದು ಹೇಳಿದ್ದಾರೆ.