ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ, ಡಿಸಿಎಂ ಆಗಿ ಆಯ್ಕೆಯಾಗಿ ರಾಜ್ಯಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಾಯಕರು

ಹೂವಿನ ಮಳೆ ಸುರಿಸಿದ ಕಾರ್ಯಕರ್ತರು

Author2 by Author2
May 18, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ನಂತರ, ಸಿಎ ಕುರ್ಚಿಗಾಗಿ ಕಾದಾಟ ನಡೆದಿತ್ತು. ಸದ್ಯ ಆ ಸಮಸ್ಯೆ ಕೂಡ ಮುಕ್ತಾಯವಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಆಯ್ಕೆಯಾಗಿದ್ದಾರೆ. ಸದ್ಯ ಇಬ್ಬರು ನಾಯಕರು, ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ.

ಇಂದು ಸಂಜೆ 7 ಗಂಟೆ ಸುಮಾರಿಗೆ ಹೆಚ್‍ಎಎಲ್ ವಿಮಾನ ನಿಲ್ದಾಣ (HAL Airport) ಕ್ಕೆ ಬಂದಿಳಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಲಾಯಿತು. ನಂತರ ಕಾರಿನಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ನಂತರ ಸಿದ್ದರಾಮಯ್ಯ ಅವರು ನೇರವಾಗಿ ತಮ್ಮ ಕುಮಾರಕೃಪಾ ನಿವಾಸಕ್ಕೆ ತೆರಳಿದರು. ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂವಿನ ಸುರಿಮಳೆಗೈದರು.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

March 22, 2026

ಕುಮಾರಕೃಪಾದಿಂದ ನೇರವಾಗಿ ಕೆಪಿಸಿಸಿ (KPCC Office) ಕಚೇರಿಗೆ ತೆರಳಲಿರುವ ಸಿದ್ದರಾಮಯ್ಯ ನಂತರ ಇಂದಿರಾ ಭವನದಲ್ಲಿ ನಡೆಯುವ ಸಿಎಲ್‍ಪಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ನಿವಾಸದಲ್ಲಿ ಅದಾಗಲೇ ಆಗಮಿಸಿರುವ ಅಭಿಮಾನಿಗಳು ಜೈಕಾರ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಪರ ಘೋಷಣೆ ನಿವಾಸದ ಮುಂದೆ ಮುಗಿಲುಮುಟ್ಟಿದೆ. ನಂತರ ಕಾಂಗ್ರೆಸ್ ಶಾಸಕಾಂಗ ಸಭೆ (CLP Meeting) ಯಲ್ಲಿ ಕೆಲವು ನಿರ್ಣಯಗಳು ನಡೆಯಲಿವೆ. ಬಹುಮತ ಪಡೆದ ನಂತರ ಎರಡನೇ ಶಾಸಕಾಂಗ ಸಭೆ ಇದಾಗಿದ್ದು, ಶಾಸಕಾಂಗ ಸಭೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ವೀಕ್ಷಕರು ಹಾಜರಾಗಲಿದ್ದಾರೆ. ರಾಜ್ಯ ಉಸ್ತುವಾರಿಯಿಂದ ಎಐಸಿಸಿಯಲ್ಲಿ ನಡೆದ ನಿರ್ಣಯದ ಪ್ರಸ್ತಾಪ ಆಗಲಿದೆ. ಎಐಸಿಸಿ ಅಧ್ಯಕ್ಷರು ಸಿಎಂ ಹಾಗೂ ಡಿಸಿಎಂ ಆಗಿ ಆಯ್ಕೆ ಮಾಡಿರುವ ವಿಚಾರ ಪ್ರಸ್ತಾಪಿಸಲಾಗುತ್ತದೆ.

ಎಐಸಿಸಿ ನಿರ್ಣಯಕ್ಕೆ ಇಂದಿನ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರ ಅನುಮೋದನೆ ನೀಡಲಾಗುತ್ತದೆ. ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲು ಶಾಸಕಾಂಗ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ. ಹಕ್ಕು ಮಂಡನೆ ನಿರ್ಣಯಕ್ಕೆ ಎಲ್ಲ ಶಾಸಕರು ಲಿಖಿತ ಸಹಿ ಹಾಕಲಿದ್ದಾರೆ. ನೂತನ ಸಿಎಲ್ಪಿ ನಾಯಕನ ಆಯ್ಕೆ ಪತ್ರ ಸಿದ್ದಪಡಿಸಲಾಗುತ್ತದೆ. ಸಿಎಲ್‍ಪಿ ನಿರ್ಣಯದೊಂದಿಗೆ ಹೋಗಿ ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರ ಭೇಟಿಯಾಗಲಿದ್ದಾರೆ. ರಾಜ್ಯಪಾಲರ ಮುಂದೆ ಸರ್ಕಾರ ರಚನೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಅವಕಾಶ ನೀಡುವಂತೆ ಮನವಿ ಮಾಡಲಾಗುತ್ತದೆ.

Tags: DCMLeaders who gave grand entry to the state by being elected as CM
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

by Shwetha
March 21, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಈಗ ದೆಹಲಿ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಣ್ಣೆ ನಗರಿಯ ರಾಜಕೀಯದಲ್ಲಿ...

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram