ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿ | ಕುತೂಹಲ ಮೂಡಿಸಿದ ಬಿ.ಎಲ್.ಸಂತೋಷ್ ಹೇಳಿಕೆ
ಮೈಸೂರು: ಬಿಜೆಪಿ ಹೊಸ ಮುಖಗಳನ್ನು ಪರಿಚಯಿಸುತ್ತಿರುವುದರಿಂದ, ಬಿಜೆಪಿ ಅಧಿಕಾರಕ್ಕೇರಲು ಸಾಧ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.
ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಯೋಗ ಗುಜರಾತ್‍ನಲ್ಲೂ ಯಶಸ್ವಿಯಾಗಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದೇವೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ. ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಅಧಿಕಾರಕ್ಕೇರಿದ್ದೇವೆ ಇಂತಹ ಪ್ರಯೋಗಳನ್ನು ಬಿಜೆಪಿ ಮಾತ್ರ ಮಾಡುತ್ತೆ ಎಂದರು.
ಇನ್ನೂ ರಾಜ್ಯದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ಇದ್ದು, ಚುನಾವಣೆಗೆ ಒಂದು ವರ್ಷ ಇರುವಾಗಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯ ಈ ಹೇಳಿಕೆ ಸಾಕಷ್ಟು ಕುತುಹಲ ಮೂಡಿಸಿದೆ. ಈ ಹೊಸ ಪ್ರಯೋಗ ಕರ್ನಾಟಕದಲ್ಲೂ ನಡೆಯುತ್ತಾ ಕಾದು ನೋಡಬೇಕಿದೆ.
ಇದರಿಂದ ಯಾವ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತದೆ ಎಂದು ಕಾದು ನೋಡಬೇಕಾಗಿದೆ. ಹಾಗೇ ದೆಹಲಿ ಪ್ರವಾಸ ಮುಗಿಸಿಕೊಂಡು ರಾಜ್ಯಕ್ಕೆ ಸಿಎಂ ಬೊಮ್ಮಾಯಿ ವಾಪಸ್ ಆಗಿದ್ದು ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಕುರಿತು ಯಾವ ಹೊಸ ಬಾಂಬ್ ಸಿಡಿಯುತ್ತೆ ಕಾದು ನೋಡ ಬೇಕಿದೆ..








