ಕೊರೊನೊ ಮಹಾಮಾರಿ ವಿರುದ್ದ ವೈದ್ಯಕೀಯ ಸಿಬ್ಬಂದಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಟ ನಡೆಸುತ್ತಿದ್ದಾರೆ. ಆದರೆ ವೈದಕೀಯ ಸಿಬ್ಬಂದಿ ನಮ್ಮ ಮನೆಯಲ್ಲಿ ಇದ್ದರೆ ಸೋಂಕು ಹರಡುತ್ತದೆ ಎಂಬ ಭಯದಿಂದ ಮನೆ ಮಾಲಿಕರು ಅವರನ್ನು ಹೊರ ಹಾಕುವ ಪರಿಸ್ಥಿತಿ ಉಂಟಾಗುತ್ತಿದೆ. ಬಾಡಿಗೆ ಮನೆಯಲ್ಲಿರುವ ಎಷ್ಟೋ ಜನ ವೈದ್ಯರಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಇದೊಂದು ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿತ್ತು. ಈ ಸುದ್ದಿ ತಿಳಿಯುತ್ತಿದಂತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈದ್ಯಕೀಯ ಸಿಬ್ಬಂದಿಗೆ ತೊಂದರೆ ನೀಡಿದರೆ ಕ್ರಮ ಗ್ಯಾರಂಟಿ ಎಂದು ಸಿ.ಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಕೊರೊನಾ ಹರಡುವಿಕೆ ತಡೆಯಲು ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡಲು ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಮನೆಗಳು ಖಾಲಿ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ. ಇದು ಸಾರ್ವಜನಿಕ ಸೇವೆ ಮಾಡುವವರ ಕರ್ತವ್ಯಕ್ಕೆ ಅಡ್ಡಿಪಡಿಸಿದಂತೆ ಆಗುತ್ತದೆ, ಅಲ್ಲದೆ ಇದೊಂದು ಗಂಭೀರ ಸ್ವರೂಪದ ಅಪರಾಧವಾಗುತ್ತದೆ. ಹಾಗಾಗಿ ಯಾರೂ ಸಹ ವೈದ್ಯಕೀಯ ಸಿಬ್ಬಂದಿಗೆ ಮನೆ ಖಾಲಿ ಮಾಡಿ ಎಂದು ಹೇಳುವಂತಿಲ್ಲ ಎಂದು ಬಿ ಎಸ್.ವೈ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ ವೈ, ವೈದ್ಯಕೀಯ ಸಿಬ್ಬಂದಿಗೆ ಮನೆ ಖಾಲಿ ಮಾಡುವಂತೆ ಹೇಳುವಂತಿಲ್ಲ. ಇದು ಅಪರಾಧವಾಗುತ್ತದೆ. ಒಂದು ವೇಳೆ ಯಾರಾದರೂ ವೈದ್ಯರಿಗೆ ತೊಂದರೆ ಕೊಟ್ಟರೇ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದ ಎಂದು ಎಚ್ಚರಿಕೆ ನೀಡಿದ್ದಾರೆ








