ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯು (ತೀವ್ರ ನಿಗಾ ಘಟಕ)ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಆಶಾ ಭೋಂಸ್ಲೆ ಅವರು ಭಾರತೀಯ ಸಂಗೀತ ಲೋಕದ ದಿಗ್ಗಜರಾಗಿದ್ದು, ತಮ್ಮ ದೀರ್ಘ ಸಂಗೀತ ಪಯಣದಲ್ಲಿ 12,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರು ಹಿಂದಿ, ಬಂಗಾಳಿ, ಮರಾಠಿ, ಕನ್ನಡ, ತಮಿಳು, ತೆಲುಗು ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ.
ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಭಿಮಾನಿಗಳು ಮತ್ತು ಸಂಗೀತ ಕ್ಷೇತ್ರದ ಗಣ್ಯರು ಆತಂಕ ವ್ಯಕ್ತಪಡಿಸುತ್ತಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.







