ಬೆಂಗಳೂರು: ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ರಾಜ್ಯ ಬಿಜೆಪಿ ಭಾನುವಾರ ಶಾಸಕಾಂಗ ಸಭೆ ಕರೆದಿದೆ. ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಸಭೆಯ ಅಧ್ಯಕ್ಷತೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ವಹಿಸಲಿದ್ದಾರೆ. ಸಚಿವರು,ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಕೆಲ ಶಾಸಕರು ಅಸಮಾಧಾನಗೊಂಡಿದ್ದು, ಇವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಈ ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್, ಜೆಡಿಎಸ್ ನಿಂದ ವಲಸೆ ಬಂದವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುತ್ತಿರುವುದು ಮೂಲ ಬಿಜೆಪಿಯವರ ಕಣ್ಣು ಕೆಂಪಾಗುವಂತೆ ಮಾಡಿದೆ. ಇತ್ತ ಪಕ್ಷದ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಎರಡು ದಿನಗಳ ಹಿಂದೆಯಷ್ಟೇ ಶಾಸಕಾಂಗ ಸಭೆ ಕರೆಯಬೇಕೆಂದು ಒತ್ತಾಯ ಮಾಡಿದ್ದರು. ಸೋಮವಾರದಿಂದ ಆರಂಭವಾಗಲಿರುವ ಜಂಟಿ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಕಾಂಗ್ರೆಸ್-ಜೆಡಿಎಸ್ ಸದನದಲ್ಲಿ ತರಾಟೆಗೆ ತೆಗೆದುಕೊಳ್ಳಲು ತುದಿಗಾಲಲ್ಲಿ ನಿಂತಿವೆ. ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯಲು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಿದೆ.
ಕಡ್ಡಾಯ ಹಾಜರಿಗೆ ಸೂಚನೆ!
ಭಾನುವಾರ ನಡೆಯುವ ಶಾಸಕಾಂಗಸಭೆಗೆ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಹಾಜರಾಗಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ. ಸದನದಲ್ಲಿ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು. ಅದರಲ್ಲೂ ಸಚಿವರು, ಸದಸ್ಯರು ಕೇಳುವ ಪ್ರಶ್ನೆಗೆ ಸಮರ್ಪಕ ಉತ್ತರ ನೀಡುವುದು, ಕಲಾಪದ ವೇಳೆ ಎಲ್ಲರೂ ಒಗ್ಗಟ್ಟು ಪ್ರದರ್ಶನ ಮಾಡುವುದು ಸೇರಿದಂತೆ ಪ್ರತಿಪಕ್ಷಗಳನ್ನು ಎದುರಿಸಲು ಶಾಸಕರು ಸಜ್ಜಾಗುವಂತೆ ಈ ಸಭೆಯಲ್ಲಿ ಶಾಸಕರಿಗೆ ಸಿಎಂ ಸಲಹೆ ನೀಡಲಿದ್ದಾರೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....