ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ (Vidhan Parishad Elections) ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ 8 ಜನರಿಗೆ ಟಿಕೆಟ್ ನೀಡಲಾಗಿದೆ.
ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ 8 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಟಿಕೆಟ್ ಪಡೆದಿದ್ದಾರೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿಗೆ ಟಿಕೆಟ್ ನೀಡಲಾಗಿದೆ.