Leopard Attack : ಅಸ್ಸಾಂ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ; 13 ಮಂದಿಗೆ ಗಾಯ….
ಹುಲಿ, ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ಎಲ್ಲಾದರೊಂದು ಕಡೆ ವರದಿಯಾಗುತ್ತಲೆ ಇರುತ್ತವೆ. ಇತ್ತೀಚೆಗೆ ಅಸ್ಸಾಂ ರಾಜ್ಯದಲ್ಲಿ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ ದಾಳಿಯಿಂದಾಗಿ 13 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಸೋಮವಾರ ಚಿರತೆಯೊಂದು ಜನವಸತಿ ಪ್ರದೇಶಕ್ಕೆ ಪ್ರವೇಶಿಸಿ ಅನೇಕ ಜನರ ಮೇಲೆ ದಾಳಿ ನಡೆಸಿದೆ. ಈ ವೇಳೆ ಚಿರತೆ ದಾಳಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಳೆ ಅರಣ್ಯ ಸಂಶೋಧನಾ ಸಂಸ್ಥೆಯ ಬಳಿ ಈ ಘಟನೆ ನಡೆದಿದೆ. ಚಿರತೆ ದಾಳಿ ಮಾಡುತ್ತಿರುವ ವಿಡಿಯೋವನ್ನ ಕೆಲವರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.
ಇದೇ ವೇಳೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಪೊಲೀಸ್ ಹಾಗೂ ಅರಣ್ಯಾಧಿಕಾರಿಗಳು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಚಿರತೆ ಹಿಡಿಯಲು ಮೂರು ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಎಸ್ಪಿ ತಿಳಿಸಿದರು.
Leopard Attack : Leopard in Assam’s Jorhat attacked 13 people including three forest officials