ಹಾವೇರಿ: ರಸ್ತೆ ಬದಿ ಚಿರತೆ ಪ್ರತ್ಯಕ್ಷವಾಗಿದ್ದು, ಸವಾರರು ಭಯದಿಂದ ಓಡಿ ಹೋಗಿರುವ ವಿಡಿಯೋವೊಂದು ವೈರಲ್ ಆಗಿದೆ.
ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ರಸ್ತೆ ಹತ್ತಿರ ಚಿರತೆ ಪ್ರತ್ಯಕ್ಷಗೊಂಡಿದೆ (Leopard Spotted). ಕಾರಿನಲ್ಲಿ ಹೋಗುತ್ತಿದ್ದವರು ಇದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಹನ ಸವಾರರು ಭೀತಿಯಲ್ಲಿದ್ದು, ಕೂಡಲೇ ಚಿರತೆ ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆ ಸಿಬ್ಬಂದಿಯಲ್ಲಿ ಮನವಿ ಮಾಡಿದ್ದಾರೆ.