ಮೈಸೂರು: ನಗರದಲ್ಲಿರುವ ಇನ್ಫೋಸಿಸ್ (Infosys) ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ.
ಕ್ಯಾಂಪಸ್ ಅಂಗಳದಲ್ಲಿ ಚಿರತೆಯ ಚಲನವಲನ ಕ್ಯಾಂಪಸ್ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಹೇಳಲಾಗಿದೆ.
ಬೆಳಗ್ಗೆ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗೆ ಸುದ್ದಿ ಮುಟ್ಟಿಸಲಾಗಿದ್ದು, ಚಿರತೆ ಸೆರೆಗೆ ಕ್ರಮ ವಹಿಸಲಾಗಿದೆ.
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ
ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...








