ಬೆಂಗಳೂರು: ಹಲವು ದಿನಗಳಿಂದ ಬೆಂಗಳೂರಿಗರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬಲೆಗೆ ಬಿದ್ದಿದೆ.
ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಬೋನಿಗೆ ಬಿದ್ದಿದೆ. ಈ ಚಿರತೆ ಕೆಲವು ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಓಡಾಡಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದನ್ನು ಕಂಡು ಜನರು ಆತಂಕ ವ್ಯಕ್ತಪಡಿಸಿದ್ದರು.
ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುವ ಕೈಗಾರಿಕಾ ಪ್ರದೇಶವಾದ ಇಂತಹ ಕಡೆ ಚಿರತೆ ಓಡಾಟಕ್ಕೆ ಜನ ಬೆಚ್ಚಿಬಿದ್ದಿದ್ದರು. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಪ್ ಮಾಡಿ ಮೂರು ಬೋನ್ ಗಳನ್ನ ಇಟ್ಟಿದ್ದರು. ಕೊನೆಗೂ ಚಿರತೆ ಬಲೆಗೆ ಬಿದ್ದಿದೆ. ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲು ಸಿದ್ದತೆ ನಡೆಯುತ್ತಿದೆ.