ಬೆಂಗಳೂರು : ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿದೆ.
ಇದಕ್ಕೆ ಕಾಂಗ್ರೆಸ್ ನ 23 ಶಾಸಕರು ಎದ್ದು ನಿಂತು ಬೆಂಬಲ ಸೂಚಿಸಿದ್ದು, ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಕೋರಂ ಇದೆ ಎಂದ ಸ್ಪೀಕರ್ ಕಾಗೇರಿ, ಇಂದು ಅಥವಾ ನಾಳೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ನವರು ಹೀಗೆ ಮಾಡುತ್ತಾ ಇರಲಿ.
ಹೀಗೆ ಮಾಡುದರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತೆ. ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.
ಇದೇ ವೇಳೆ ರೈತ ಸಂಘಟದ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಮಧ್ಯಾಹ್ನ ರೈತ ಸಂಘದ ಮುಖಂಡರನ್ನು ಭೇಟಿಯಾಗುವಂತೆ ಹೇಳಿದ್ದೇನೆ.
ಈ ವರೆಗೆ ಕೈಗಾರಿಕೆಗೆ ಶೇ.2 ರಷ್ಟು ಭೂಮಿಯನ್ನು ಮಾತ್ರ ಬಳಸಲಾಗುತ್ತಿದೆ. ಆದರೆ ನೀರಾವರಿಯ ಭೂಮಿಯನ್ನು ಯಾರೇ ಖರೀದಿ ಮಾಡಿದರೂ ರೈತರಿಗೆ ಯಾವುದೇ ತೊಂದರೆ ಆಗಲ್ಲ.
ಆ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.








