ನವದೆಹಲಿ : ಖ್ಯಾತ ಅರ್ಥಶಾಸ್ತ್ರಜ್ಞ , ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಕಳೆದ ರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ನ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಏತನ್ಮಧ್ಯೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಈ ಕುರಿತು ಟ್ವೀಟ್ ಮಾಡಿದ್ದು, ‘ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ದೇಶದಲ್ಲಿ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇಂತಹ ಹಿರಿಯ ನಾಯಕನ ಮಾರ್ಗದರ್ಶನ ಅತ್ಯಾವಶ್ಯಕ’ ಎಂದು ಎಂದಿದ್ದಾರೆ.
ಇನ್ನು ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ ಮನಮೋಹನ್ ಸಿಂಗ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ. ದೇಶದ ಬಿಲಿಯನ್ ಗಿಂತ ಹೆಚ್ಚು ನಾಗರಿಕರು ಮನಮೋಹನ್ ಸಿಂಗ್ ಅವರು ಶೀಘ್ರವೇ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆಂದು ಬರೆದುಕೊಂಡಿದ್ದಾರೆ.








