ನವದೆಹಲಿ: ಮುಡಾ ಹಗರಣದ ವಿಷಯವಾಗಿ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಸಂಘರ್ಷ ನಡೆಯುತ್ತಿದೆ. ಈ ಮಧ್ಯೆ ಸಿಎಂ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಹೇಳಿದ್ದಾರೆ. ಹೀಗಾಗಿ ವಿಧಾನಸೌಧಕ್ಕೆ ಸಚಿವರು ಹೋಗುತ್ತಿಲ್ಲ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ನೀಡುತ್ತಾರೋ ಎಂದು ಅವರು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ತಾಯಿಯಲ್ಲಿ ಆಶೀರ್ವಾದ ಬೇಡಿಕೊಂಡು ಬಂದಂತಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರ ಆಡಳಿತದ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಇವತ್ತಲ್ಲ ನಾಳೆ ಸಿಎಂ ರಾಜೀನಾಮೆ ಕೊಡಲೇಬೇಕು. ಹೈಕೋರ್ಟ್ ನ ತೀರ್ಪು ಬಂದ ನಂತರ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.