congress tweet | ಸಿಎಂಗೆ ತಿರಂಗಾ ಮೇಲೆ ಗೌರವ ಇದ್ದರೇ ಶಿಕ್ಷಣ ಸಚಿವರನ್ನ ವಜಾಗೊಳಿಸಲಿ
ಬೆಂಗಳೂರು : ಸಿಎಂಗೆ ತಿರಂಗಾ ಮೇಲೆ ಗೌರವ ಇದ್ದಿದ್ದೇ ಆದರೆ ವಿವೇಕವಿಲ್ಲದ ಶಿಕ್ಷಣ ಸಚಿವರನ್ನು ವಜಾಗೊಳಿಸಲಿ ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.
ತುಮಕೂರಿನಲ್ಲಿ ಸಚಿವ ಬಿ.ಸಿ.ನಾಗೇಶ್ ಅವರು ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಚಿವರ ಈ ನಡೆ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಾಲ್ಗೊಂಡಿದ್ದರು. ಈ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಮೇಲೆ ಕೇಸರಿ ಧ್ವಜವನ್ನು ಹಿಡಿದು ಸಚಿವ ನಾಗೇಶ್ ಮೆರವಣಿಗೆ ಎದುರು ಸಾಗಿದ್ದರು.
ಇದಕ್ಕೆ ಇದೀಗ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಕಿಡಿಕಾರಿದೆ. ಈಶ್ವರಪ್ಪ ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದಿದ್ದರು, ಬಿ.ಸಿ ನಾಗೇಶ್ ಕೇಸರಿ ಧ್ವಜದ ಮುಂದೆ ರಾಷ್ಟ್ರಧ್ವಜವನ್ನು ಕುಗ್ಗಿಸಿದ್ದಾರೆ. ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾಗಿಸುವ ಪ್ರಯತ್ನದ ಮುನ್ಸೂಚನೆಯೇ ಇದು ಬಿಜೆಪಿ ಎಂದು ಅನುಮಾನ ವ್ಯಕ್ತಪಡಿಸಿದೆ.
ಅಲ್ಲದೇ ಸಿಎಂಗೆ ತಿರಂಗಾ ಮೇಲೆ ಗೌರವ ಇದ್ದಿದ್ದೇ ಆದರೆ ವಿವೇಕವಿಲ್ಲದ ಶಿಕ್ಷಣ ಸಚಿವರನ್ನು ವಜಾಗೊಳಿಸಲಿ ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.