ಶಾಸಕ ಸ್ಥಾನಕ್ಕೆ ಯತ್ನಾಳ್ Yatnal ರಾಜೀನಾಮೆ ನೀಡಲಿ : ರೇಣುಕಾಚಾರ್ಯ
ಬೆಂಗಳೂರು : ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಮ್ಮ ಜೊತೆಗೆ 120 ಶಾಸಕರಿದ್ದು, ದೆಹಲಿಗೆ ಹೋಗಿ ನಾಯಕರನ್ನು ಭೇಟಿ ಮಾಡಿ ದೂರು ಕೊಡುತ್ತೇವೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ರೂ ಪದೇಪದೆ ಪಕ್ಷದ ವಿರುದ್ಧ ಮಾತನಾಡ್ತಾರೆ.
ಬಸನಗೌಡ ಪಾಟೀಲ ಯತ್ನಾಳ್ ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ಆಮೇಲೆ ಮಾತನಾಡಲಿ ಎಂದು ಸವಾಲ್ ಎಸೆದರು.
ಇನ್ನು ಯಡಿಯೂರಪ್ಪ ಪಕ್ಷ ಕಟ್ಟಿ ಬೆಳೆಸಿದವರು. ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಒಪ್ಪಲ್ಲ.
ಮಾತನಾಡುವವರು ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ.
ಯಡಿಯೂರಪ್ಪ ಟೀಕೆ ಮಾಡುವುದು ಒಂದೇ, ಪಕ್ಷದ ವಿರುದ್ಧ ಮಾತನಾಡುವುದು ಒಂದೇ ಎಂದು ರೇಣುಕಾಚಾರ್ಯ ಗರಂ ಆದರು.









