ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಪಿಸಿಸಿಯ ಅಧ್ಯಕ್ಷರು ಹಾಗೂ ನಮ್ಮ ನಿಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರಾದ ಗೌರವಾನ್ವಿತ ಶ್ರೀ ಡಿಕೆ ಶಿವಕುಮಾರ ಜೀ ಅವರಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ತಮ್ಮ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಲಕ್ಷಾಂತರ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಪರವಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
![]()
ಬೆನ್ನು ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಡಿಕೆಶಿ ಬೆಂಗಳೂರಿನ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ಸದ್ಯ ತಜ್ಞ ವೈದ್ಯರಿಂದ ಅವರಿಗೆ ಚಿಕಿತ್ಸೆ ಮುಂದುವರಿದಿದೆ.









