ಬೆಂಗಳೂರು: ವ್ಯಕ್ತಿಯೊಬ್ಬ ಊಟಕ್ಕೆ ಹೋಗೋಣ ಎಂದು ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಹೋಟೆಲ್ ಗೆ ಊಟಕ್ಕೆ ಹೋಗೋಣ ಎಂದು ಹೇಳಿ ಕಂಪೆನಿ ವ್ಯವಸ್ಥಾಪಕನೇ ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಡಿಸೆಂಬರ್ 31ರಂದು ಊಟಕ್ಕೆ ಕರೆದೊಯ್ದು ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಸವೇಶ್ವರ ನಗರದಲ್ಲಿನ ಕಾಲ್ ಸೆಂಟರ್ ಕಂಪೆನಿ ವ್ಯವಸ್ಥಾಪಕ ಕೆ.ಆರ್ .ಪುರಂ ನಿವಾಸಿ ಸೈಯದ್ ಅಕ್ರಂ ಬಂಧಿತ ಆರೋಪಿ ಎನ್ನಲಾಗಿದೆ. 32 ವರ್ಷದ ಸಂತ್ರಸ್ತೆ ಬಸವೇಶ್ವರ ನಗರ ಪೊಲೀಸ್ (Basaveshwaranagara Police) ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಾನು ಮತ್ತು ನನ್ನ ಪತಿ ಬಸವೇಶ್ವರ ನಗರದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇವು. ಮ್ಯಾನೇಜರ್ ಆಗಿ ಸೈಯದ್ ಅಕ್ರಂ ಎಂಬಾತ ಇದ್ದ. ಡಿಸೆಂಬರ್ 31ರಂದು ಆತ ಊಟ ಮಾಡಲು ಹೋಟೆಲ್ ಗೆ ಹೋಗೋಣವೆಂದು ಹೇಳಿದ್ದ. ನಂತರ ತನ್ನ ಬೈಕಿನಲ್ಲಿ ಆತನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.








