ಚಾಮರಾಜನಗರ : ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ಕೊಟ್ಟಿವೆ.
ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ಪ್ರತಿಭಟನೆ ಮಾಡೋದು, ಹೋರಾಟ ಮಾಡೋದು ಎಲ್ಲರ ಹಕ್ಕು ಆದರೆ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ, ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗದಂತೆ ಪ್ರತಿಭಟನೆ ನಡೆಸಲಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಚಾಮರಾಜನಗರದಲ್ಲಿ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ಸುರೇಶ್ ಕುಮಾರ್, ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಅಂಶಗಳನ್ನು ಸ್ವತಃ ಕಾಂಗ್ರೆಸ್ಸಿನ ಆರ್.ವಿ ದೇಶಪಾಂಡೆ ಅಂಶಗಳನ್ನು ಒಪ್ಪಿಕೊಂಡಿದ್ದಾರೆ.
ಶೀಘ್ರದಲ್ಲೇ ಬೆಂಗಳೂರಿನಲ್ಲಿ ಎನ್ ಐಎ ಕಚೇರಿ ಸ್ಥಾಪನೆ
ಪ್ರೊ.. ಎಂ.ಡಿ ನಂಜುಂಡಸ್ವಾಮಿಯವರ ಆಶಯವೂ ಸಹ ಅದೇ ಆಗಿತ್ತು. ಸದನದಲ್ಲಿ ಸಚಿವ ಅಶೋಕ್ ಕೂಡ ಕಾಯ್ದೆ ತಿದ್ದುಪಡಿ ಬಗ್ಗೆ ವಿವರವಾಗಿ ಹೇಳಿದ್ದಾರೆ.
2022ರ ಒಳಗೆ ರೈತರ ಪ್ರಗತಿ ಹಾಗಿ ಅವರ ಆದಾಯ ದ್ವಿಗುಣಗೊಳಿಸುವುದು ಮಸೂದೆ ತಿದ್ದುಪಡಿಯ ಉದ್ದೇಶ ಆಗಿದೆ ಎಂದು ತಿಳಿಸಿದರು.
ಇದೇ ವೇಳೆ ಅವಿಶ್ವಾಸ ನಿರ್ಣಯ ವಿಚಾರದ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಅವಿಶ್ವಾಸ ನಿರ್ಣಯ ಬಿದ್ದು ಹೋಗಿದೆ. ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಾಗಿದೆ ಎಂದು ಟಾಂಗ್ ನೀಡಿದರು.








