LIC AE Recruitment 2025 : ಭಾರತೀಯ ಜೀವ ವಿಮಾ ನಿಗಮದಲ್ಲಿ ಅಗತ್ಯ ಅಸಿಸ್ಟಂಟ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ :
ಅಸಿಸ್ಟಂಟ್ ಇಂಜಿನಿಯರ್ & ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 491 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್) 50
ಅಸಿಸ್ಟಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್) 31
ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್) 410
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್) – ಬಿ.ಟೆಕ್/ ಬಿ.ಇ (ಸಿವಿಲ್)
• ಅಸಿಸ್ಟಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್) – ಬಿ.ಟೆಕ್/ ಬಿ.ಇ (ಇಲೆಕ್ಟ್ರಿಕಲ್)
• ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್) – ಪದವಿ, ಸಿಎ, ಸಿಎಸ್, ಎಲ್.ಎಲ್.ಬಿ.
ವಯೋಮಿತಿ :
ದಿನಾಂಕ 01 ಆಗಸ್ಟ್ 2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
ಹುದ್ದೆ ವಯೋಮಿತಿ
ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್) ಕನಿಷ್ಠ 21 ವರ್ಷ – ಗರಿಷ್ಠ 30 ವರ್ಷ
ಅಸಿಸ್ಟಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್) ಕನಿಷ್ಠ 21 ವರ್ಷ – ಗರಿಷ್ಠ 30 ವರ್ಷ
ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸಿಎ, ಲೀಗಲ್) ಕನಿಷ್ಠ 21 ವರ್ಷ – ಗರಿಷ್ಠ 32 ವರ್ಷ
ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸಿಎಸ್, ಅಕ್ಚುಅರಿಯಲ್, ಇನ್ಶುರೆನ್ಸ್ ಸ್ಪೆಷಲಿಸ್ಟ್) ಕನಿಷ್ಠ 21 ವರ್ಷ – ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ (ಜನರಲ್) ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 88,635 ರಿಂದ ರೂ. 1,69,025 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 85
• ಉಳಿದ ಅಭ್ಯರ್ಥಿಗಳು – ರೂ. 700
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 16, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 08, 2025
ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಅಕ್ಟೋಬರ್ 03, 2025
ಮುಖ್ಯ ಪರೀಕ್ಷೆ ದಿನಾಂಕ : ನವೆಂಬರ್ 08, 2025








