LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ : ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 36 ಹುದ್ದೆಗಳು ಖಾಲಿ ಇದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಅರ್ಹತೆ ಹೊಂದಿರಬೇಕು.
ವಯೋಮಿತಿ : ದಿನಾಂಕ 01-06-2025ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಸ್ಟೈಫಂಡ್ ನೀಡಲಾಗುತ್ತದೆ.
ಆಯ್ಕೆ ವಿಧಾನ : ಎಂಟ್ರನ್ಸ್ ಎಕ್ಸಾಂ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಪರೀಕ್ಷಾ ಶುಲ್ಕದ ವಿವರ :
• ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು – ರೂ. 944
• ಎಸ್ಸಿ, ಎಸ್ಟಿ & ಮಹಿಳಾ ಅಭ್ಯರ್ಥಿಗಳು – ರೂ. 708
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 472
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 13, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 28, 2025
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 30, 2025
ಎಂಟ್ರನ್ಸ್ ಎಕ್ಸಾಂ ದಿನಾಂಕ : ಜುಲೈ 03, 2025
Website:https://nats.education.gov.in/regular_student.php