ಮಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಿದ್ದ ಪಾಪಿ ಪತಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಶರಣಪ್ಪ ಬಾಳಪ್ಪ 2019 ಏಪ್ರಿಲ್ 20 ರಂದು ತನ್ನ ಪತ್ನಿಯನ್ನು ಕೊಲೆ ಮಾಡದ್ದ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಎಸ್‌ಐ ಹರೀಶ್ ಪ್ರಕರಣ ದಾಖಲಿಸಿಕೊಂಡು, ಕಾವೂರು ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಆರ್. ನಾಯಕ್ ಆರೋಪ ಆರೋಪ ಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗೆ ಹಾಲಿ ಇನ್‌ಸ್ಪೆಕ್ಟರ್ ರಾಘವ ಪಡೀಲ್ ಅವರು ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ 18 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ.
ನಿನ್ನೆ ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕಡ್ಲೂಡು ಸತ್ಯನಾರಾಯಾಣಾಚಾರ್ಯ ಅವರು ಶರಣಪ್ಪನಿಗೆ ಜೀವಾವಧಿ ಶಿಕ್ಷೆ ಹಾಗೂ 10,000 ರೂ ದಂಡ ವಿಧಿಸಿದ್ದಾರೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








