ಅಮರಾವತಿ: ಆಂಧ್ರ ಪ್ರದೇಶ ಸಿಎಂ ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ತಿಳಿದು ಬಂದಿದೆ.
ಅವರ ಕಚೇರಿಗೆ ದೂರವಾಣಿ ಕರೆ ಮಾಡಿದ ದುಷ್ಕರ್ಮಿ ಉಪಮುಖ್ಯಮಂತ್ರಿಗಳನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಪದಗಳನ್ನ ಬಳಸಿ, ಬೆದರಿಕೆ ಸಂದೇಶಗಳನ್ನು ಕಳುಸಹಿಲಾಗಿದೆ. ನಾವು ಅವರ ಪಕ್ಕದಲ್ಲೇ ಇದ್ದೇಕೆ, ಅವರನ್ನು ಕೊಲ್ಲುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾನೆ ಎನ್ನಲಾಗಿದೆ. ಸದ್ಯ ಈ ವಿಚಾರವನ್ನು ಕಚೇರಿಯ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚೆಗೆ ನಾಯಕರು ಸೇರಿದಂತೆ ಬೇರೆ ಬೇರೆ ವಿಷಯಗಳಿಗೆ ಬೆದರಿಕೆ ಬರುತ್ತಿರುವುದು ಆತಂಕ ಮೂಡಿಸುತ್ತಿದೆ.