ಕರ್ನಾಟಕ ಹೈಕೋರ್ಟ್ ನ್ಯಾಯಾದೀಶರಿಗೆ ಜೀವ ಬೆದರಿಕೆ | ಇಬ್ಬರ ಬಂಧನ
ಚೆನ್ನೈ: ಹಿಜಾಬ್ ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದ, ಇಬ್ಬರು ಕಿಡಿಗೇಡಿಗಳನ್ನು ತಮಿಳುನಾಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡಿನ ತಿರುನೆಲ್‌ವೇಲಿ ಎಂಬಲ್ಲಿ ಕೊವಾಯಿ ರಹಮುತುಲ್ಲಾ ಹಾಗು ತಂಜಾವೂರಿನಲ್ಲಿ ಎಸ್.ಜಮಾಲ್ ಮೊಹಮ್ಮದ್ ಉಸ್ಮಾನಿ ಎಂಬಾತನನ್ನು ಶನಿವಾರ ರಾತ್ರಿ ಸೆರೆ ಹಿಡಿಯಲಾಗಿದೆ. ಈ ಇಬ್ಬರು ದುಷ್ಕರ್ಮಿಗಳು ತಮಿಳುನಾಡು ತೌಹೀದ್ ಜಮಾತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ಈ ಆರೋಪಿಗಳನ್ನು ಪೊಲೀಸರು ಅರೇಸ್ಟ್ ಮಾಡಿದ್ದಾರ. ಇದೇ ವೇಳೆ ಈ ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಜಾರ್ಖಂಡ್‌ನಲ್ಲಿ ಬೆಳಗಿನ ವಾಕಿಂಗ್ ವೇಳೆ ಜಿಲ್ಲಾ ನ್ಯಾಯಾಧೀಶರೊಬ್ಬರ ಮೇಲೆ ವಾಹನ ಹರಿಸಿ ಕೊಂದು ಹಾಕಲಾಗಿತ್ತು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕೂಡಾ ಎಲ್ಲಿಗೆ ಬೆಳಗಿನ ವಾಕ್ ಹೋಗುತ್ತಾರೆ ಅನ್ನೋದು ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ಕೊಲೆ ಬೆದರಿಕೆ ಹಾಕಿದ್ದಾನೆ.
ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಹಾಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ತಮಿಳುನಾಡು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದರು.
ಅಲ್ಲದೆ ಪ್ರಕರಣದ ಗಂಭೀರತೆ ಅರಿತ ಬೆಂಗಳೂರು ವಕೀಲರ ಸಂಘ, ಪ್ರಕರಣವನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ.
ಇದೇ ವೇಳೆ, ಬೆಂಗಳೂರು ಪೊಲೀಸರು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರುಗಳಿಗೆ ಭದ್ರತೆ ಹೆಚ್ಚಿಸಿದ್ದಾರೆ.








