ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಹೀಗಾಗಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗೆ ಆರಂಭಿಸಿರುವ 112 ಸಂದೇಶದ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಕರೆ ಮಾಡಿದ್ದ ವ್ಯಕ್ತಿ, ನಾನು ಸಿಎಂ ಯೋಗಿಯನ್ನು ಶೀಘ್ರದಲ್ಲಿಯೇ ಕೊಲ್ಲುತ್ತೇನೆ ಎಂದು ಹೇಳಿದ್ದಾನೆ. ಬೆದರಿಕೆ ಬಂದ ನಂತರ, ‘112’ ನ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಅಪರಿಚಿತ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 506, 507 ಮತ್ತು ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ ಪಿಎಸ್ ಸುಶಾಂತ್ ಗಾಲ್ಫ್ ಸಿಟಿಯಲ್ಲಿ 506 ಮತ್ತು 507 ಐಪಿಸಿ ಮತ್ತು 66 ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಏಪ್ರಿಲ್ 24ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ್ದ ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ.ಸೇತು ರಾಮನ್, ಪ್ರಧಾನಿ ವಿರುದ್ಧ ಬೆದರಿಕೆ ಪತ್ರ ಕಳುಹಿಸಿದ ಕ್ಸೇವಿಯರ್ ಎಂಬ ವ್ಯಕ್ತಿ ಬಂಧಿಸಲಾಗಿದೆ.