ಕೊಲ್ಕತ್ತಾ : ಸಿಡಿಲು ಬಡಿದ (Lightning strikes) ಪರಿಣಾಮ ಪಶ್ಚಿಮ ಬಂಗಾಳದಲ್ಲಿ 14 ಜನ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದಿದೆ.
ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಈ ಸಂದರ್ಭದಲ್ಲಿ ಸಿಡಿಲು ಬಡಿದು 14 ಜನ ಸಾವನ್ನಪ್ಪಿದ್ದಾರೆ. ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು, ಮುರ್ಷಿದಾಬಾದ್ ಹಾಗೂ ಉತ್ತರ 24 ಪರಗಣದಲ್ಲಿ ತಲಾ ಇಬ್ಬರು, ಪಶ್ಚಿಮ ಮಿಡ್ನಾಪುರ ಹಾಗೂ ಹೌರಾದಲ್ಲಿ ತಲಾ ಮೂವರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ (Disaster Management Department) ಅಧಿಕಾರಿಗಳು ಹೇಳಿದ್ದಾರೆ.
ಮೃತಪಟ್ಟವರಲ್ಲಿ ಹೆಚ್ಚಿನವರು ರೈತರಾಗಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿವೆ. ೭೯ ಕಿ.ಮೀ ವೇಗದಲ್ಲಿ ಬೀಸಿದ ಗಾಳಿಯಿಂದ ಮಳೆ ಸಂಭವಿಸಿದೆ. ಅಲ್ಲದೆ ಗಾಳಿಯ ಈ ವೇಗ ಒಂದು ನಿಮಿಷಕ್ಕಿಂತಲೂ ಕಡಿಮೆ ಅವಧಿಯದ್ದಾಗಿತ್ತು ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ (Meteorological Centre) ಅಧಿಕಾರಿ ತಿಳಿಸಿದ್ದಾರೆ. ಹೀಗಾಗಿ ಅಲ್ಲಿ ಸಾವು-ನೋವು ಸಂಭವಿಸಿವೆ.