ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ದೃಢಪಟ್ಟ ವೃದ್ಧೆ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶ ಕಂಟೋನ್ಮೆಂಟ್ ವಲಯ

admin by admin
April 23, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಕೊರೋನಾ ಸೋಂಕಿನಿಂದ ಮೃತ ಪಟ್ಟ ಬಂಟ್ವಾಳ ಮಹಿಳೆಯ ಅತ್ತೆಯ ಗಂಟಲ ದ್ರವ ಪರೀಕ್ಷೆಯ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ಇದೀಗ ಅವರಿಗೂ ಕೋವಿಡ್- 19 ಸೋಂಕು ತಗುಲಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಅತ್ತೆ ಚಿಕಿತ್ಸೆ ಪಡೆಯುತ್ತಿದ್ದ ಪಡೀಲ್ ಸಮೀಪದ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಿ, ಎಲ್ಲಾ ಚಟುವಟಿಕೆಗಳಿಗೆ ದ.ಕ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.

ಮೃತ ಮಹಿಳೆಯ ಅತ್ತೆ 75 ವರ್ಷದವರಾಗಿದ್ದು, ಕಳೆದ ಒಂದು ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟ ಕಾರಣ ಫಸ್ಟ್ ನ್ಯೂರೋ ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಾದವರು, ಆಸ್ಪತ್ರೆಗೆ ಭೇಟಿ ನೀಡಿದವರು, ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ಎಲ್ಲರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸುವ ಜೊತೆಗೆ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

Related posts

saakshatv-hubballi-hunters-kannada-movie-release-december-11

ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ ‘ಬೆಲ್‌ ಬಾಟಮ್’ ನಿರ್ಮಾಪಕರ ‘ಹುಬ್ಬಳ್ಳಿ ಹಂಟರ್ಸ್’!

October 15, 2026
saakshatv-jio-platforms-growth-roadmap-indias-largest-ipo

ಭಾರತದ ಅತಿ ದೊಡ್ಡ ಐಪಿಒ ಆಗುವ ಮುಂಚೆ ಜಿಯೋದ ಮುಂದಿನ ಮಾರ್ಗನಕ್ಷೆ ಅನಾವರಣ

October 15, 2026

ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಯನ್ನು “ಸುಪರ್ವೈಸ್ಡ್ ಐಸೋಲೆಟೆಡ್ ಸೆಂಟರ್” ಆಗಿ ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿರುವ ರೋಗಿಗಳು, ಸಿಬ್ಬಂದಿಗಳು, ವೈದ್ಯರು, ನರ್ಸ್ ಗಳು ಸೇರಿದಂತೆ ಆಸ್ಪತ್ರೆಯಿಂದ ಯಾರು ಹೊರಬರುವಂತಿಲ್ಲ ಹಾಗೂ ಯಾರು ಕೂಡಾ ಒಳಹೋಗುವಂತಿಲ್ಲ. ಆಸ್ಪತ್ರೆಯಲ್ಲಿ ಇದ್ದವರಿಗೆ ಆಹಾರ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಲಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಹೊಂದಿಕೊಂಡಿರುವ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಸೀಮಿತ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಿ, ಎಲ್ಲಾ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಈ ವಲಯದಲ್ಲಿ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದ್ದು, ಮನೆಯಿಂದ ಯಾರು ಹೊರಗೆ ಹೋಗುವಂತಿಲ್ಲ, ಹಾಗೂ ಹೊರಗಡೆಯಿಂದ ಈ ಪ್ರದೇಶಕ್ಕೆ ಬರುವುದನ್ನು ಸಂಪೂರ್ಣ ನಿರ್ಬಂಧಿಸುವ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ.

ಖಾಸಗಿ ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಾಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರ್ಕಾರಿ ಜಾಗದ ಸುತ್ತ ಕಂಟೋನ್ಮೆಂಟ್ ಪ್ರದೇಶ ಘೋಷಣೆ ಮಾಡಲಾಗಿದ್ದು, ಆಸ್ಪತ್ರೆಯ ಜೊತೆಗೆ ಎರಡು ಮನೆ, ಐದು ಅಂಗಡಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅಲ್ಲಿಂದ 5 ಕಿಲೋಮೀಟರ್ ವರೆಗಿನ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಲಾಗಿದ್ದು, ಕಲ್ಲಾಪು, ಕುಡುಪು, ಫರಂಗಿಪೇಟೆ, ಫಳ್ನೀರ್ ಪ್ರದೇಶದ 42 ಸಾವಿರ ಮನೆಗಳು, 1800 ಅಂಗಡಿ ಮತ್ತು ಕಚೇರಿ, 1.8 ಲಕ್ಷ ಜನರು ಈ ವ್ಯಾಪ್ತಿಗೆ ಬರಲಿದ್ದಾರೆ.

ಮೃತ ಮಹಿಳೆಯ ಪತಿ ಹಾಗೂ ಮಗನ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿಲ್ಲ. ಮೃತ ಮಹಿಳೆಯ ಅತ್ತೆಯಲ್ಲಿ ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಈ ಪೈಕಿ 12 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದು , 4 ಪ್ರಕರಣಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: Bantwalcoronavirus
ShareTweetSendShare
Join us on:

Related Posts

saakshatv-hubballi-hunters-kannada-movie-release-december-11

ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ ‘ಬೆಲ್‌ ಬಾಟಮ್’ ನಿರ್ಮಾಪಕರ ‘ಹುಬ್ಬಳ್ಳಿ ಹಂಟರ್ಸ್’!

by admin
October 15, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿಟ್ ಚಿತ್ರ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ದಿನಾಂಕ...

saakshatv-jio-platforms-growth-roadmap-indias-largest-ipo

ಭಾರತದ ಅತಿ ದೊಡ್ಡ ಐಪಿಒ ಆಗುವ ಮುಂಚೆ ಜಿಯೋದ ಮುಂದಿನ ಮಾರ್ಗನಕ್ಷೆ ಅನಾವರಣ

by admin
October 15, 2026
0

ಮುಂಬೈ, ಅಕ್ಟೋಬರ್ 15: ಭಾರತದ ಇದುವರೆಗಿನ ಅತಿ ದೊಡ್ಡ ಐಪಿಒಗೂ ಮುನ್ನ ಜಿಯೋ ಪ್ಲಾಟ್‌ಫಾರ್ಮ್ಸ್ ತನ್ನ ಮುಂದಿನ ಹಂತದ ಬೆಳವಣಿಗೆಯ ಮಾರ್ಗನಕ್ಷೆ (ರೋಡ್‌ಮ್ಯಾಪ್) ಅನ್ನು ಬಹಿರಂಗಪಡಿಸಿದೆ. ಮುಂಬೈನಲ್ಲಿ...

saakshatv-java-yezdi-diwali-festival-bike-finance-offers

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by admin
October 15, 2026
0

ದೀಪಾವಳಿ ಹಾಗೂ ಹಬ್ಬದ ಸೀಸನ್ ಶುರುವಾಗುತ್ತಲೇ ಬೈಕ್ ಪ್ರಿಯರಿಗೆ 'ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್' ಭರ್ಜರಿ ಸಿಹಿಸುದ್ದಿ ನೀಡಿದೆ. ಗ್ರಾಹಕರು ತಮ್ಮ ನೆಚ್ಚಿನ ಬೈಕ್ ಅನ್ನು ಸುಲಭವಾಗಿ ಖರೀದಿಸಲು...

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

by Shwetha
October 15, 2026
0

ತಂದೆಯ ಹೆಸರಿನಲ್ಲಿ ಭೂ ನ್ಯಾಯಮಂಡಳಿಯಿಂದ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram