ಬೆಳಗಾವಿ: ವಿದ್ಯುತ್ ಪ್ರವಹಿಸಿದ ಪರಿಣಾಮ ಲೈನ್ ಮ್ಯಾನ್ ಕಂಬದ ಮೇಲೆಯೇ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ಮ್ಯಾನ್ ಪ್ರೇಮಾನಂದ ಎಮ್ಮಿ(25) ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇವರು ತಾಲೂಕಿನ ಹುಲಿಕಟ್ಟಿ ಗ್ರಾಮದವರು ಎನ್ನಲಾಗಿದೆ.
ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಕಂಬ ಹತ್ತಿಸಿದ್ದರೆಂದು ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.