ಬೆಂಗಳೂರು: ವಿರೋಧಗಳ ಮಧ್ಯೆ ಜಾತಿಗಣತಿ ಸರ್ಕಾರದ ಕೈ ಸೇರಿದ್ದು, ಸ್ವ ಪಕ್ಷದಲ್ಲಿಯೇ ಇದಕ್ಕೆ ಅಪಸ್ವರ ವ್ಯಕ್ತವಾಗುತ್ತಿದೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಶಾಸಕ ವಿನಯ್ ಕುಲಕರ್ಣಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಾ. ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವರು ಅಪಸ್ವರ ಎತ್ತಿದ್ದಾರೆ.
ಗಣತಿ ವರದಿ ಅವೈಜ್ಞಾನಿಕವಾಗಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮನೆ ಮನೆಗೆ ಭೇಟಿ ನೀಡದೆ ಅವೈಜ್ಞಾನಿಕವಾಗಿ ತಯಾರಿಸಲಾದ ವರದಿಯನ್ನು ನಾವು ಒಪ್ಪುವುದಿಲ್ಲ. ಈಗಾಗಲೇ ಇದನ್ನು ವಿರೋಧಿಸಿ ಎರಡು ಬಾರಿ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಜಾತಿ ಗಣತಿ ವರದಿಯಲ್ಲಿ ಕೆಲ ದೋಷಗಳಿವೆ. 4 ಜನರ ಮನೆಗೆ ಹೋಗಿದ್ದರೆ, ಕೆಲವರ ಮನೆಗೆ ಸಮೀಕ್ಷೆಗೆ ಹೋಗಿಲ್ಲ. ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಹೋಗಿ ಮಾಹಿತಿ ಸಂಗ್ರಹಿಸಿಲ್ಲ. ಹೀಗಾಗಿ ಜಾತಿಗಣತಿಯಲ್ಲಿ ಕೆಲವು ಗೊಂದಲಗಳಿವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.