ಕೊಪ್ಪಳ: ರಾಜ್ಯದ ವೀರಶೈವ ಲಿಂಗಾಯತ ಜನಾಂಗದವರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕೆಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಗಂಗಾವತಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ 35 ವರ್ಷಗಳಿಂದ ಅಖಿಲಭಾರತ ವೀರಶೈವ ಮಹಾಸಭಾದವರು ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಮುಂದಾಗಿದ್ದರು ಎಂದರು.

ಲಿಂಗಾಯತರಿಗೆ ಮೀಸಲಾತಿ ಶಿಫಾರಸು ಸಂಬಂಧ ಸಚಿವ ಸಂಪುಟದಲ್ಲಿ ಚರ್ಚೆ ನಡೆಯಲಿದೆ. ವೀರಶೈವ-ಲಿಂಗಾಯತ ಕುಲಶಾಸ್ತ್ರೀಯ ಅಧ್ಯಯನ, ಕಾನೂನು ಪಂಡಿತರ ಅಭಿಪ್ರಾಯ ಹಾಗೂ ಸುಪ್ರೀಂಕೋರ್ಟ್ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಗಮನಕ್ಕೆ ತೆಗೆದುಕೊಂಡ ನಂತರ ಕೇಂದ್ರ ಸರಕಾರಕ್ಕೆ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ ಎಂದು ತಿಳಿಸಿದರು.
ಶೀಘ್ರದಲ್ಲೇ 16000 ಪೆÇಲೀಸ್ ಹುದ್ದೆಗಳ ಭರ್ತಿ ಮಾಡಲಾಗುತ್ತದೆ. ಪ್ರತಿ ತಾಲೂಕು ಕೇಂದ್ರದಲ್ಲಿ ಮಹಿಳಾ ಪೆÇಲೀಸ್ ಠಾಣೆ ಆರಂಭಕ್ಕೆ ಬೇಡಿಕೆ ಬರುತ್ತಿದೆ. ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಯುವ ಮುಖಂಡ ಸಾಗರ ಮುನವಳ್ಳಿ ಇದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








