ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ (Liquor Size). ಈ ಮದ್ಯವನ್ನು ಆಂಧ್ರಪ್ರದೇಶಕ್ಕೆ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ 4,28,740 ರೂ. ಮೌಲ್ಯದ 320.760 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಜಂಗಿಲಿ ರಾಮು ಎಂಬಾತನನ್ನು ಬಂಧಿಸಿದ್ದಾರೆ (Arrest). ಅನಮೋಡ್ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.