ಬೆಂಗಳೂರ: ರಾಜ್ಯಾದ್ಯಂತ ಜೂನ್ 1ರಿಂದ ಒಂದು ವಾರ ರಾಜ್ಯದಲ್ಲಿ ಮದ್ಯ ಮಾರಾಟ(Liquor Ban) ಬಂದ್ ಆಗಿರಲಿದೆ. ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಲಿದೆ.
ಜೂನ್ 1 ಮತ್ತು ಜೂನ್ 3 ರಂದು ಹಲವೆಡೆ ಮಾತ್ರ ಭಾಗಶಃ ಮದ್ಯ ಮಾರಾಟಕ್ಕೆ (Dry days) ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ರೀತಿ ಮಾಡಲಾಗುತ್ತದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಸದ್ಯ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಶನಿವಾರ ಸಂಜೆಯೇ ಮದ್ಯ ಮಾರಾಟದ ಮೇಲಿನ ನಿಷೇಧವು ಪ್ರಾರಂಭವಾಗುತ್ತದೆ. ವಾರಾಂತ್ಯದಲ್ಲಿಯೇ ಹೆಚ್ಚು ಮದ್ಯ ಮಾರಾಟವಾಗುತ್ತದೆ. ಆದರೆ, ಈ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದ್ದರಿಂದಾಗಿ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ.
ಆಹಾರ ಪೂರೈಸಲು ಪಬ್‌ಗಳು ಮತ್ತು ರೆಸ್ಟೋಬಾರ್‌ಗಳಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿರುವುದಾಗಿ ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್‌ಗಳ ಸಂಘದ (ಎನ್‌ಆರ್‌ಎಐ) ಪ್ರತಿನಿಧಿಗಳು ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ.
ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರ ವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ಬ್ರೇಕ್. ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧವಿದೆ. ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಬಂದ್ ಮಾಡಲಾಗುತ್ತಿದೆ.