ಮದ್ಯದ ಮೇಲೆ ಶೇ. 20ರಷ್ಟು ತೆರಿಗೆ ಏರಿಕೆ ಮಾಡುತ್ತಿದ್ದಂತೆ ಮದ್ಯ ಮಾರಾಟದಲ್ಲಿ ಬಾರೀ ಕಡಿಮೆಯಾಗಿದೆ. ಮದ್ಯ ಪ್ರಿಯರು ದರ ಹೆಚ್ಚಾಗಿದ್ದಕ್ಕೆ ಕುಡಿಯುವುದನ್ನೇ ಕಡಿಮೆ ಮಾಡಿದ್ದಾರೆ.
ಮದ್ಯದ ದರ ಏರಿಕೆಯಾಗಿರುವುದರಿಂದ ಮದ್ಯ ಮಾರಾಟದಲ್ಲಿ ತೀವ್ರ ಕುಸಿತ ಕಂಡಿದೆ. ಆಗಸ್ಟ್ ನಲ್ಲಿ ಶೇ. 10ರಿಂದ 15ರಷ್ಟು ಕಡಿಮೆ ಪ್ರಮಾಣದ ಮದ್ಯ ಮಾರಾಟವಾಗಿದೆ. ಬಜೆಟ್ ನಲ್ಲಿ ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದ್ದು, ಬಿಯರ್ ಗೆ ಶೇ. 10ರಷ್ಟು ಹಾಗೂ ಉಳಿದ ಮದ್ಯಕ್ಕೆ ಶೇ. 20ರಷ್ಟು ಸುಂಕ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ.
ಸದ್ಯ ಬಿಯರ್ ಹೊರತಾಗಿ ಉಳಿದ ಮದ್ಯ ಮಾರಾಟ ಪ್ರಮಾಣ ಕಳೆದ ವರ್ಷಕ್ಕಿಂತಲೂ ಶೇ. 14.25ರಷ್ಟು ಕಡಿಮೆಯಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಹೇಳಿದೆ. ಸ್ಕಾಚ್ ಕುಡಿಯುತ್ತಿದ್ದವರು ಪ್ರೀಮಿಯಂ ಬ್ರಾಂಡ್, ಪ್ರೀಮಿಯಂ ಬ್ರಾಂಡ್ ಸೇವಿಸುತ್ತಿದ್ದವರು ಅದಕ್ಕಿಂತ ಕೆಳಗಿನ ಬ್ರಾಂಡ್ ಖರೀದಿಸುತ್ತಿದ್ದಾರೆ. ಕೆಲವೆಡೆ ನಕಲಿ ಮದ್ಯ ಮಾರಾಟ ಹೆಚ್ಚಾಗುತ್ತಿದೆ. ಜುಲೈನಲ್ಲಿ 3.556.25 ಕೋಟಿ ರೂ. ಮೌಲ್ಯದ ಬಿಯರ್ ಸೇರಿ ಎಲ್ಲ ಬಗೆಯ ಮಾರಾಟವಾಗಿದೆ. ಆಗಸ್ಟ್ ತಿಂಗಳ 15 ದಿನಗಳಲ್ಲಿ 1,302.90 ಕೋರಿಟ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ಸದ್ಯ ಬಿಯರ್ ಮಾರಾಟ ಹೆಚ್ಚಾಗಿದ್ದು, ಉಳಿದ ಮದ್ಯ ಮಾರಾಟ ಪ್ರಮಾಣ ಕುಸಿತ ಕಂಡಿದೆ.