ಲಕ್ನೋ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ಭಾರತೀಯರು ಆ ಸುಂದರ ಸಮಯಕ್ಕೆ ಕಾಯುತ್ತಿದ್ದಾರೆ.
ಈಗಾಗಲೇ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಈ ಗಳಿಗೆಗೆ ಸಾಕ್ಷಿಯಾಗಲಿ ಎಂಬ ಕಾರಣಕ್ಕೆ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಉತ್ತರ ಪ್ರದೇಶದ (Uttar Pradesh)ಲ್ಲಿನ ಎಲ್ಲ ಜೈಲುಗಳಲ್ಲಿ ರಾಮಮಂದಿರ (Ram Mandir) ಉದ್ಘಾಟನೆ ಸಮಾರಂಭದ ನೇರ ಪ್ರಸಾರ ಮಾಡಲಾಗುವುದು ಎಂದು ಸಚಿವ ಧರ್ಮವೀರ್ ಪ್ರಜಾಪತಿ ತಿಳಿಸಿದ್ದಾರೆ.
ಇದರಿಂದಾಗಿ ಕೈದಿಗಳು ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುತ್ತದೆ. ಸದ್ಯ 1.05 ಲಕ್ಷಕ್ಕೂ ಹೆಚ್ಚು ಕೈದಿಗಳಿದ್ದಾರೆ. ಅವರು ಈ ಸಂದರ್ಭದಿಂದ ದೂರ ಉಳಿಯದಂತೆ ನೋಡಿಕೊಳ್ಳಲು, ರಾಜ್ಯದ ಎಲ್ಲಾ ಜೈಲುಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುವುದು ಎಂದು ಹೇಳಿದ್ದಾರೆ.
ಜ. 2 ರಂದು ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪ್ರದಾನಿ ನರೇಂದ್ರ ಮೋದಿ ಸೇರಿದಂತೆ ಸಾವಿರಾರು ಗಣ್ಯರು ಭಾಗವಹಿಸಲಿದ್ದಾರೆ.








