ಸೆಲ್ಫಿ ನೆಪದಲ್ಲಿ ಮಹಿಳೆ, 1 ವರ್ಷ ಹಾಗೂ 13 ವರ್ಷದ ಬಾಲಕನನ್ನು ಮಹಿಳೆಯ ಲಿವ್ ಇನ್ ಪಾರ್ಟ್ನರ್ ನದಿಯಲ್ಲಿ ತಳ್ಳಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಆಂಧ್ರಪ್ರದೇಶದ (Andhra Pradesh) ಗುಂಟೂರಿನಲ್ಲಿ (Guntur) ನಡೆದಿದೆ. ಸೇತುವೆಗೆ ಅಳವಡಿಸಲಾಗಿದ್ದ ಪ್ಲಾಸ್ಟಿಕ್ ಪೈಪ್ ಅನ್ನು ಬಿಗಿಯಾಗಿ ಹಿಡಿದು, ಪೊಲೀಸರ ಸಹಾಯಕ್ಕಾಗಿ ಬಾಲಕಿ 100ಕ್ಕೆ ಕರೆ ಮಾಡಿದ್ದಾಳೆ.
ಮಹಿಳೆ ಹಾಗೂ ಮಕ್ಕಳನ್ನು ಸೇತುವೆಗೆ ತಳ್ಳಿದ ಆರೋಪಿ ಉಳವ ಸುರೇಶ್ ಸುಹಾಸಿನಿಯ ಲಿವ್ ಇನ್ ಪಾರ್ಟ್ನರ್ ಎಂದು ಗುರುತಿಸಲಾಗಿದೆ. ಗಂಡನಿಂದ ದೂರವಾಗಿದ್ದ ಸುಹಾಸಿನಿಗೆ ಸುರೇಶ್ ಪರಿಚಯವಾಗಿದ್ದ. ಇಬ್ಬರೂ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು. ಇತ್ತೀಚೆಗೆ ಸುರೇಶ್ ಪಿಕ್ನಿಕ್ ಕರೆದುಕೊಂಡು ಹೋಗಿದ್ದ ಮಾತ್ರವಲ್ಲದೇ ಗೆಳತಿ ಹಾಗೂ ಆಕೆಯ ಮಕ್ಕಳನ್ನು ಕೊಲ್ಲುವ ಸಂಚು ರೂಪಿಸಿದ್ದ. ಸೆಲ್ಫಿ ನೆಪದಲ್ಲಿ ಗೋದಾವರಿ ನದಿ ಬಳಿ ಕಾರು ನಿಲ್ಲಿಸಿ, ಮೂವರನ್ನು ಸೇತುವೆ ಬಳಿ ಕರೆದುಕೊಂಡು ಹೋಗಿ ನದಿಗೆ ತಳ್ಳಿದ್ದಾನೆ.
ಬಾಲಕಿ ಕೀರ್ತನ ಈ ವೇಳೆ ಪೈಪ್ ಅನ್ನು ಗಟ್ಟಿಯಾಗಿ ಹಿಡಿದು ತನ್ನ ಪ್ರಾಣ ಉಳಿಸಿಕೊಂಡಿದ್ದಾಳೆ. ತನ್ನ ಜೇಬಿನಿಂದ ಫೋನ್ ತೆಗೆದು ಸಹಾಯಕ್ಕಾಗಿ 100 ನಂಬರ್ ಅನ್ನು ಡಯಲ್ ಮಾಡಿದ್ದಾಳೆ. ತಾಯಿ ಹಾಗೂ 1 ವರ್ಷದ ಮಗು ಸದ್ಯ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.








