Live in Relationship : ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳೆ ಶವವಾಗಿ ಪತ್ತೆ..
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿಯ ಕೊಲೆಗೈದು 35 ಪೀಸ್ ಮಾಡಿದ್ದ ಪ್ರಕರಣ ಇನ್ನೂ ಮಾಸಿಲ್ಲ..
ಇದೀಗ ಮತ್ತೊಂದು ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಹುಡುಗಿಯ ಕೊಲೆ ಸುದ್ದಿ ಬೆಳಕಿಗೆ ಬಂದಿದೆ..
ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ದೆಹಲಿಯ ಮಂಗೋಲ್ ಪುರ ಕಲನ್ ಗ್ರಾಮದಲ್ಲಿ ನಡೆದಿದೆ.
ಮಂಗೋಲ್ ಪುರ ಕಲನ್ ಗ್ರಾಮದ ಮನೆಯೊಂದರ 2ನೇ ಮಹಡಿಯಲ್ಲಿ 36 ವರ್ಷದ ಮಹಿಳೆಯ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಹಿಳೆ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, ಆಕೆ ಆಗ್ರಾ ಮೂಲದ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದಳು ಎನ್ನಲಾಗಿದೆ.
ಈ ಇಬ್ಬರು ಒಟ್ಟಾಗಿ ಇರುವುದನ್ನು ಮನೆ ಮಾಲೀಕರು ಅನೇಕ ಬಾರಿ ನೋಡಿದ್ದರು. ಆದರೆ ನಿನ್ನೆ ಮನೆಯ ಬಾಗಿಲು ಅರ್ಧ ತೆಗೆದಿರುವುದನ್ನು ಗಮನಿಸಿದ ಮನೆ ಮಾಲೀಕರು ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಮಹಿಳೆ ಶವವಾಗಿ ಬಿದ್ದಿದ್ದಳು. ಅಷ್ಟೇ ಅಲ್ಲದೇ ಆಕೆಯೊಂದಿಗೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ನಾಪತ್ತೆ ಆಗಿದ್ದಾನೆ.
ಘಟನೆಗೆ ಸಂಬಂಧಿಸಿ ಕೂಡಲೇ ರೋಹಿಣಿ ದಕ್ಷಿಣ ಪೊಲೀಸ್ ಠಾಣೆಗೆ ಮನೆ ಮಾಲೀಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶವವನ್ನು ವಶಕ್ಕೆ ಪಡೆದು, ಪೋಸ್ಟ್ ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮೊದಲಿಗೆ ಪೊಲೀಸರು ಆಕೆಯೊಂದಿಗೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿಗೆ ಕರೆ ಮಾಡುವ ಪ್ರಯತ್ನ ಮಾಡಿದ್ದಾರೆ.. ಆದರೆ ಆತನ ಫೋನ್ ಸ್ವಿಚ್ ಆಫ್ ಆಗಿದೆ..
ಈ ಹಿನ್ನೆಲೆಯಲ್ಲಿ ಆಕೆಯ ಪತಿಯನ್ನ ಸಂಪರ್ಕಿಸಿದ್ದಾರೆ. ಈ ವೇಳೆ ಆಕೆಗೆ 2011 ರಲ್ಲಿ ವಿವಾಹವಾಗಿದ್ದು, ಒಬ್ಬ ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.
ಮಹಿಳೆ ಅನೇಕ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ದೆಹಲಿಗೆ ಚಿಕಿತ್ಸೆಗೆ ಬಂದಂತಹ ಸಂದರ್ಭದಲ್ಲಿ ಓರ್ವ ವ್ಯಕ್ತಿಯ ಪರಿಚಯವಾಗಿ ಆತನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ತಿಳಿದುಬಂದಿದೆ..