ನವದೆಹಲಿ : ಚೀನಾ, ಜಿಡಿಪಿ, ಕೊರೊನಾ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ದಾಳಿ ಮುಂದುವರಿಸಿದ್ದಾರೆ.
ಇಂದಿನ ತಮ್ಮ ಟ್ವೀಟ್ ನಲ್ಲಿ ರಾಹುಲ್ ಗಾಂಧಿ, ‘ಬಾಂಗ್ಲಾದೇಶದೊಂದಿಗಿನ ಭಾರತದ ಸಂಬಂಧ ದುರ್ಬಲಗೊಳ್ಳುತ್ತಿದ್ದು, ಚೀನಾದೊಂದಿಗಿನ ಒಪ್ಪಂದಗಳು ಬಲಗೊಳ್ಳುತ್ತಿವೆ’ ಎಂಬ ‘ದಿ ಎಕನಾಮಿಸ್ಟ್’ ಪತ್ರಿಕೆಯ ಸುದ್ದಿಯ ತುಣಕನ್ನು ಟ್ಯಾಗ್ ಮಾಡಿ, ‘ನೆರೆ-ಹೊರೆಯಲ್ಲಿ ಸ್ನೇಹಿತರಿಲ್ಲದೇ ಜೀವಿಸುವುದು ತುಂಬಾ ಅಪಾಯ’ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಈ ಆರೋಪವನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ, ಭಾರತ ಹಲವು ರಾಷ್ಟ್ರಗಳೊಂದಿಗೆ ಒಪ್ಪಂದಗಳ ಜತೆಗೆ ಗಾಢವಾದ ಸಂಬಂಧವನ್ನು ಹೊಂದಿದೆ.
ಇದು ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಬಲಗೊಳ್ಳಲು ಕಾರಣವಾಗಿದೆ ಎಂದು ಪ್ರತಿಕ್ರಿಯಿಸಿದೆ.
Mr Modi has destroyed the web of relationships that the Congress built and nurtured over several decades.
Living in a neighbourhood with no friends is dangerous. pic.twitter.com/OxGzzHoEYb
— Rahul Gandhi (@RahulGandhi) September 23, 2020








