ಹಲ್ಲಿ ಬಿದ್ದಿದ್ದ ಊಟ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ಎಖಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸೇವಿಸಿದ ನಂತರ ವಾಂತಿ, ಅಸ್ವಸ್ಥತೆಯಿಂದ ಬಳಲಿದ್ದಾರೆ. ಆಗ ಅಧಿಕಾರಿಗಳು ಊಟದಲ್ಲಿ ಹಲ್ಲಿ ಬಿದ್ದಿದ್ದನ್ನು ಕಂಡಿದ್ದಾರೆ. ಕೂಡಲೇ ಊಟ ನಿಲ್ಲಿಸಿ, ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿಗಲು ತುರ್ತು ವೈದ್ಯಕೀಯ ಸೇವೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಆಗಮಿಸಿ ಆವರಣ ಪರಿಶೀಲಿಸಿದ್ದಾರೆ. ಇದೇ ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಇದೇ ರೀತಿ ಘಟನೆ ನಡೆದಿದ್ದು, ಆ ವೇಳೆ 25 ಜನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಹೀಗಾಗಿ ಶಾಲಾ ಸಿಬ್ಬಂದಿಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.