ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ತುಮಕೂರಿನ ಮಧುಗಿರಿ ತಾಲೂಕಿನ ಸಿದ್ದಾಪುರ ಪ್ರಾಥಮಿಕ ಶಾಲೆಯ ಶತಮಾನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸುರೇಶ್ ಕುಮಾರ್, ಶಿಕ್ಷಣ ಆರ್ಥಿಕವಾಗಿ ಬಡ ಇಲಾಖೆಯಾದರೂ ಇಲ್ಲಿ ಕಾರ್ಯ ನಿರ್ವಹಿಸಲು ಉತ್ತಮ ಅವಕಾಶವಿದೆ ಎಂದು ಹೇಳಿದ್ರು. ನನ್ನ ತಾಯಿ ಶಿಕ್ಷಕಿಯಾಗಿದ್ದರಿಂದ ನನಗೆ ಶಿಕ್ಷಣ ಇಲಾಖೆಯ ಋಣ ತೀರಿಸುವ ಅವಕಾಶ ಸಿಕ್ಕಿದೆ, ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ ಶಿಕ್ಷಣ ಸಚಿವರು, ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ರು.
ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳ ವ್ಯಾಂಸಂಗದ ಕುರಿತು ಮಾತನಾಡಿದ ಸುರೇಶ್ ಕುಮರ್ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಯಾವುದೇ ಕಾರಣಕ್ಕೂ ದೇಶದ ವಿರುದ್ಧ ಹೋಗುವುದಿಲ್ಲ ಏಕೆಂದರೆ ಈ ಮಕ್ಕಳಿಗೆ ತಮ್ಮ ನೆಲದ ಸಂಸ್ಕøತಿ ಪರಿಚಯವಿರುತ್ತದೆ ಎಂದು ಅಭಿಪ್ರಾಯಪಟ್ಟರು.








