ಶೀಘ್ರದಲ್ಲೇ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭ : ಬಿ.ಸಿ.ನಾಗೇಶ್ LKG UKG Saaksha tv
ಬೆಂಗಳೂರು : ಪರಿಸ್ಥಿತಿ ನೋಡಿಕೊಂಡು ಶೀಘ್ರದಲ್ಲೇ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಆವರಣದಲ್ಲಿ ಶಿಕ್ಷಣ ಸಚಿವರು ಮಕ್ಕಳ ಕಲಿಕಾ ಸಂಚಾರಿ ಬಸ್ಸನ್ನು ಸ್ವಂತ ಚಾಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದನೇ ತರಗತಿಯಿಂದ ಐದನೇ ತರಗತಿವರೆಗಿನ ಶಾಲೆ ಆರಂಭದ ನಂತರ ಪರಿಸ್ಥಿತಿ ನೋಡಿಕೊಂಡು ಎಲ್ಕೆಜಿ, ಯುಕೆಜಿ ತರಗತಿ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಸುಧಾರಣೆ ಕಾಣುತ್ತಿದೆ. ಬಿಸಿಯೂಟ ಆರಂಭವಾಗಿರುವುದರಿಂದ ಇನ್ನು ಮುಂದೆ ಮಕ್ಕಳ ಹಾಜರಾತಿ ಮತ್ತಷ್ಟು ಹೆಚ್ಚಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.