ಕೊರೊನಾ ವೈರಸ್ ನಿಂದ ದೇಶದ ಆರ್ಥಿಕ ವ್ಯವಸ್ಥೆ ದಿವಾಳಿಯಾಗಿದೆ. ಕೆಲಸವಿಲ್ಲದೆ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಸೇರಿದಂತೆ ಅನೇಕ ಜನ ಮುಂದಿನ ಬದುಕಿನ ಬಂಡಿಯ ಬಗ್ಗೆ ಚಿಂತಿಸುತ್ತಿದ್ದಾರೆ. ಹಾಗಾಗಿ ಸರ್ಕಾರಗಳು ರೈತರಿಗೆ ಸಾಲ ನೀಡಲು ಮುಂದಾಗಿವೆ. ಸಾಲ ನೀಡುವ ಮೂಲಕ ಹಣವನ್ನು ದುಡಿಸುವ ತಂತ್ರಗಾರಿಕೆ ಸರ್ಕಾರ ಮಾಡುತ್ತಿದೆ. ಅಲ್ಲದೆ ಸಾಲ ನೀಡುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ರೈತರ ಸಂಕಷ್ಟಕ್ಕೆ ನೆರವಾದಂತೆ ಆಗುತ್ತದೆ. ಆ ಕಾರಣಕ್ಕಾಗಿ ಸರ್ಕಾರದಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿ ಸಾಲ ನೀಡಲಾಗುತ್ತದೆ. ಇದರ ಜೊತೆಗೆ ಬೇರೆ ರೀತಿಯ ಸಾಲಗಳನ್ನು ಮೇ ತಿಂಗಳಿಂದ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ , ಲಾಕ್ ಡೌನ್ ಜಾರಿ ಆಗಿರುವ ಹಿನ್ನೆಲೆಯಲ್ಲಿ ಸಾಲ ನೀಡುವ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ವಿವಿಧ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳಿಂದ ಪಡೆದುಕೊಂಡ ಸಾಲದ ಕಂತು ಪಾವತಿಸಲು ಮೂರು ತಿಂಗಳು ಅವಕಾಶ ನೀಡಲಾಗಿದೆ. ಖಾಸಗಿ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ಬಲವಂತ ಮಾಡಿ ಸಾಲ ವಸೂಲಿ ಮಾಡುತ್ತಿರುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಗಮನಕ್ಕೆ ತರಲಾಗಿದೆ. ಈ ಕುರಿತಾಗಿ ರೈತರು ಆತಂಕಪಡುವ ಅಗತ್ಯವಿಲ್ಲ. ಸಾಲ ಪಾವತಿಗೆ ಮೂರು ತಿಂಗಳ ಅವಕಾಶ ಇದೆ. ಇನ್ನು ಮೇ ತಿಂಗಳಿನಿಂದ ಶೂನ್ಯ ಬಡ್ಡಿ ದರದ ಕೃಷಿ ಸಾಲ ಸೇರಿದಂತೆ ವಿವಿಧ ರೀತಿಯ ಸಾಲಗಳನ್ನು ನೀಡಲಾಗುತ್ತದೆ. ಎಂದು ತಿಳಿಸಿದರು.
ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.
56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...








