ಮಡಿಕೇರಿ: ಕೊರೊನಾ ಸೋಂಕಿನ ಸರಪಳಿಯನ್ನು ತುಂಡರಿಸಲು ರಾಜ್ಯದಾದ್ಯಂತ ಹತ್ತು ದಿನಗಳು ಲಾಕ್ ಡೌನ್ ಮಾಡುವುದು ಸೂಕ್ತ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿದೆ.
ಹೀಗಾಗಿ ಹತ್ತು ದಿನಗಳು ರಾಜ್ಯದಾದ್ಯಂತ ಪುನಃ ಲಾಕ್ ಡೌನ್ ಘೊಷಿಸಬೇಕು. ಅಲ್ಲದೇ ಕೊಡಗು ಜಿಲ್ಲೆಯನ್ನು ಹತ್ತು ದಿನ ಲಾಕ್ ಡೌನ್ ಮಾಡುವುದೇ ಸೂಕ್ತ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ : ಗಾಂಧಿಯವರನ್ನು ಕೊಂದ ಗೋಡ್ಸೆ ಬಿಜೆಪಿಯ ಆರಾಧ್ಯ ದೈವ : ಸಿದ್ದರಾಮಯ್ಯ
ಇದೇ ವೇಳೆ ಶಾಲಾ-ಕಾಲೇಜು ಓಪನ್ ಮಾಡುವ ಬಗ್ಗೆ ಮಾತನಾಡಿದ ಅವರು, ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳನ್ನು ತೆರೆಯುವುದು ಸರಿಯಲ್ಲ.
ಹಿಂದೆಲ್ಲ ಪೋಷಕರಿಗೆ ನಾಲ್ಕೈದು ಮಕ್ಕಳಿರುತ್ತಿದ್ದರು. ಆದರೆ ಪ್ರಸ್ತುತ ಒಬ್ಬರೇ ಮಕ್ಕಳನ್ನು ಹೊಂದಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಶೀಘ್ರದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಶುರು ಮಾಡುವುದು ಸೂಕ್ತವಲ್ಲ ಎಂದು ತಿಳಿಸಿದರು.








