ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆ
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ..
ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಎನ್‌ಟಿಎಜಿಐನ ಮುಖ್ಯಸ್ಥರು ಹೇಳಿದ್ದೇನು?
ಈ ಕೊರೊನಾ ಹಾವಳಿ ನಡುವೆ ಇಡೀ ವಿಶ್ವದಲ್ಲಿ ಬ್ಲಾಕ್ ಫಂಗಸ್ ಕಾಟ ಶುರುವಾಗಿತ್ತು.. ಅಲ್ಲದೇ ಡೆಲ್ಟಾ ಆತಂಕವೂ ಎದುರಾಗಿದೆ.. ಈಗಾಗಲೇ ಡೆಲ್ಟಾ ಪ್ಲಸ್ ಮಾದರಿಯ ರೂಪಾಂತರಿ ಕೋವಿಡ್ ಅನೇಕ ಜೀವಗಳ ಬಲಿಪಡೆದುಕೊಂಡಿದೆ.. ಭಾರತ ಹಾಗೂ ಕರ್ನಾಟಕದಲ್ಲೂ ಇದು ಕಾಣಿಸಿಕೊಂಡಿದೆ.. ಆದ್ರೆ ಈಗಾಗಲೇ ಸಂಪೂರ್ಣವಾಗಿ ಕೊರೊನಾ ನಿಯಂತ್ರಣಕ್ಕೆ ಬಮದಿದ್ದ ದೇಶಗಳಲ್ಲಿಯೂ ಇದೀಗ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಅನೇಕ ದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸಲಾಗ್ತಿದೆ..
ಇದೀಗ 79 ಸಕ್ರಿಯ ಪ್ರಕರಣಗಳಿರುವ ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆಯಾಗಿದೆ. ಮೇ ತಿಂಗಳ ನಂತರ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರವರೆಗೆ ಲಾಕ್‍ಡೌನ್ ಘೋಷಣೆಯಾಗಿದೆ. ಶುಕ್ರವಾರ ಒಂದೇ ದಿನ ಸಿಡ್ನಿಯಲ್ಲಿ 32 ಹೊಸ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಲಾಕ್‍ಡೌನ್ ನಿರ್ಧಾರಕ್ಕೆ ಬರಲಾಗಿದೆ. ಔಷಧಿ, ದಿನ ನಿತ್ಯದ ವಸ್ತು ಖರೀದಿ, ವ್ಯಾಯಾಮ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನೆಯಿಂದ ಹೊರ ಬರಬಹುದಾಗಿದೆ.








