ಬೆಂಗಳೂರು : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂಬ ಚರ್ಚೆ ಶುರುವಾಗಿದೆ. ಆದರೆ ಬೆಂಗಳೂರು ಪೊಲೀಸ್ ಆಯುಕ್ತ ಬಾಸ್ಕರ್ ರಾವ್ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡಿಲ್ಲ. ಮಾಡುವುದಿಲ್ಲ. ಎರಡು ಏರಿಯಾಗಳನ್ನು ಮಾತ್ರ ಲಾಕ್ ಡೌನ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಈ ಬಾರಿ ಸ್ವಯಂ ಪ್ರೇರಿತ ಲಾಕ್ ಡೌನ್ ಆಗುವ ಸಾದ್ಯತೆಯಿದೆ.
ಕನಕಪುರದಲ್ಲಿ ಜುಲೈ 1 ರವರೆಗೂ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಇನ್ನೂ ಬೆಂಗಳೂರಿನ ಚಿಕ್ಕಪೇಟೆ ಸೇರಿದಂತೆ ಕೆಲ ಭಾಗಗಳಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಆ ಹಿನ್ನೆಲೆಯಲ್ಲಿ ಕೆಲ ಪ್ರದೇಶಗಳನ್ನು ಲಾಕ್ ಡೌನ್ ಅಥಾವ ಸೀಲ್ ಡೌನ್ ಮಾಡಲಾಗುವುದು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಚರ್ಚೆ ಮಾಡಿ ತೀರ್ಮಾನಕ್ಕೆ ಬರಲು ಬಿಬಿಎಂಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಬೆಂಗಳೂರಿನ ಕೆ.ಆರ್ ಮಾರ್ಕೇಟ್ ಅನ್ನು ಬಂದ್ ಮಾಡಲು ಕೃಷಿ ಮಾರಾಟ ಇಲಾಖೆ ನಿರ್ಧಾರ ಮಾಡಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಕೆ.ಆರ್. ಮಾರ್ಕೇಟ್ ಯ ಮೂವರು ವರ್ತಕರಿಗೆ ಸೋಂಕು ದೃಡವಾಗಿದೆ. ಆ ಹಿನ್ನೆಲೆಯಲ್ಲಿ ಈ ಭಾಗವನ್ನು ಅಂದ್ರೆ ಕೆ.ಆರ್. ಮಾರ್ಕೇಟ್ ಜೊತೆಗೆ ಕಲಾಸಿಪಾಳ್ಯ ಸುತ್ತುಮುತ್ತಲಿನ ಪ್ರದೇಶವನ್ನು ಲಾಕ್ ಡೌನ್ ಮಾಡಲಾಗುತ್ತಿದೆ ಎನ್ನಲಾಗಿದೆ.