ಬೆಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿದ 46,488 ವಾಹನಗಳು ಸೀಜ್, 440 ಜನ ಅರೆಸ್ಟ್..!

1 min read

ಬೆಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿದ 46,488 ವಾಹನಗಳು ಸೀಜ್, 440 ಜನ ಅರೆಸ್ಟ್..!

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ತಡೆಗೆ ಹೇರಲಾಗಿದ್ದ ಲಾಕ್ ಡೌನ್ ವೇಳೆ ಸುಖಾಸುಮ್ಮನೆ ರಸ್ತೆಗಿಳಿದಿದ್ದ ವಾಹನಗಳನ್ನ ಪೊಲೀಸರು ಸೀಜ್ ಮಾಡಿಹಾಕಿದ್ದಾರೆ.. ಕೆಲವರಿಗೆ ಲಾಠಿ ರುಚಿ ತೋರಿಸಿ ದಂಡ ವಿಧಿಸಿದ್ದಾರೆ.. ಈ ರೀತಿ ಕೇವಲ ಬೆಂಗಳೂರಿನೊಂದ್ರಲ್ಲೇ  ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ನಗರದಲ್ಲಿ ಸಂಚರಿಸುತ್ತಿದ್ದ ಒಟ್ಟು 46,488 ವಾಹನಗಳನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದರಲ್ಲಿ 41,376 ದ್ವಿಚಕ್ರ ವಾಹನಗಳು, 2,264 ತ್ರಿಚಕ್ರ ವಾಹನಗಳು, 2,808 ನಾಲ್ಕು ಚಕ್ರದ ವಾಹನಗಳು ಸೇರಿವೆ. 753 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್‍ಡಿಎಂಎ ಕಾಯ್ದೆ ಪ್ರಕಾರ ನಗರದಲ್ಲಿ 688 ಪ್ರಕರಣಗಳು ದಾಖಲಾಗಿದ್ದು, 440 ಮಂದಿಯನ್ನು ಬಂಧಿಸಲಾಗಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd